ಪರೀಕ್ಷೆ ಬರೆದರೂ ಫಲಿತಾಂಶದ ಗೊಂದಲ; ಕುವೆಂಪು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕುವೆಂಪು ವಿವಿಯ ಪರೀಕ್ಷೆ ಮತ್ತು ಫಲಿತಾಂಶ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ಹಲವು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಮುಂದಿನ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು…
