ಸೆ.19ರಂದು ತೀರ್ಥಹಳ್ಳಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ಮಹತ್ವದ ಸಭೆ: ರೈತರಿಂದ ಮಾಹಿತಿ ಸಂಗ್ರಹ
ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಮಲೆನಾಡು ಭಾಗದಲ್ಲಿ ಮುಂದುವರಿದಿರುವ ಚರ್ಚೆಗಳ ನಡುವೆ, ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಶನಿವಾರ ಬೆಳಗ್ಗೆ 9.30ಕ್ಕೆ ತೀರ್ಥಹಳ್ಳಿಯಲ್ಲಿ ಸಭೆ ನಿಗದಿಯಾಗಿದ್ದು, ಮುಖ್ಯಮಂತ್ರಿ ಮಲೆನಾಡು ಜಿಲ್ಲೆಗಳ ಪ್ರವಾಸದ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಭೆಯಲ್ಲಿ ಮಲೆನಾಡಿನ ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿ ಕಸ್ತೂರಿರಂಗನ್…
